ಕರ್ನಾಟಕ
ಭಾರತದ ಒಂದು ರಾಜ್ಯ / From Wikipedia, the free encyclopedia
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ.
ಕರ್ನಾಟಕ
ಕರುನಾಡು | |
---|---|
ರಾಜ್ಯ | |
ದೇಶ | ಭಾರತ |
ಪ್ರದೇಶ | ದಕ್ಷಿಣ ಭಾರತ |
ಮಾಹಿತಿ | ೧ ನವೆಂಬರ್ ೧೯೫೬ |
ರಾಜಧಾನಿ | ಬೆಂಗಳೂರು |
ಅತಿ ದೊಡ್ಡ ನಗರ | ಬೆಂಗಳೂರು |
ಜಿಲ್ಲೆಗಳು | 31 |
Government | |
• Body | ಕರ್ನಾಟಕ ಸರಕಾರ |
• ರಾಜ್ಯಪಾಲರು | ಥಾವರ್ ಚಂದ್ ಗೆಹ್ಲೋಟ್ |
• ಮುಖ್ಯಮಂತ್ರಿ | ಸಿದ್ದರಾಮಯ್ಯ |
• ಶಾಸಕಾಂಗ | ದ್ವಿಸಭೆ (224 + 75 seats) |
• ಉಚ್ಛ ನ್ಯಾಯಾಲಯ | ಕರ್ನಾಟಕ ಉಚ್ಛ ನ್ಯಾಯಾಲಯ |
Area | |
• Total | ೧,೯೧,೭೯೧ km೨ (೭೪,೦೫೧ sq mi) |
• Rank | 7 ನೇ |
Highest elevation | ೧,೯೨೫ ಮೀ m (೬,೩೧೬ ft) |
Lowest elevation | ೦ ಮೀ m (೦ ft) |
Population (೨೦೧೧)[2] | |
• Total | ೬,೧೧,೩೦,೭೦೪ |
• Rank | ೮ನೇ |
• Density | ೩೨೦/km೨ (೮೩೦/sq mi) |
Time zone | UTC+5:30 (IST) |
ISO 3166 code | IN-KA |
ಸಾಕ್ಷರತಾ ಪ್ರಮಾಣ | ೭೫.೬೦% (ರಾಜ್ಯಗಳಲ್ಲಿ ೧೬ನೇ ಸ್ಥಾನ, ಕೇಂದ್ರಾಡಳಿತ ಪ್ರದೇಶಗಳನ್ನು ಸೇರಿಸಿಕೊಂಡರೆ ೨೩ನೇ ಸ್ಥಾನ)[3] |
ಎಚ್ಡಿಐ | 0.519 (medium) |
ಎಚ್ಡಿಐ ರ್ಯಾಂಕ್ | ೧೨ನೇ (೨೦೧೧) |
Website | karnataka |
೧೯೭೩ಕ್ಕೆ ಮೊದಲು ಕರ್ನಾಟಕದ ಹೆಸರು ಮೈಸೂರು ರಾಜ್ಯ ಎಂದಿತ್ತು.ಇದಕ್ಕೆ ಕಾರಣ ಕರ್ನಾಟಕ ಏಕೀಕರಣದ ಮೊದಲ ಸೃಷ್ಟಿ ಮೈಸೂರು ಮಹಾಸಂಸ್ಥಾನವನ್ನು ಆಧರಿಸಿದ್ದು (೧೯೫೦ ರಲ್ಲಿ). ೧೯೫೬ ರಲ್ಲಿ ಸುತ್ತ-ಮುತ್ತಲ ರಾಜ್ಯಗಳ ಕನ್ನಡ ಪ್ರಧಾನ ಪ್ರದೇಶಗಳನ್ನು ಸೇರಿಸಲಾಯಿತು. "ಕರ್ನಾಟಕ" ಎಂಬ ಹೆಸರಿಗೆ ಅನೇಕ ವ್ಯುತ್ಪತ್ತಿಗಳು ಪ್ರತಿಪಾದಿಸಲ್ಪಟ್ಟಿವೆ. ಎಲ್ಲಕ್ಕಿಂತ ಹೆಚ್ಚಾಗಿ ಒಪ್ಪಲ್ಪಟ್ಟಿರುವ ವ್ಯುತ್ಪತ್ತಿ ಎಂದರೆ ಕರ್ನಾಟಕ ಎಂಬುದು "ಕರು+ನಾಡು" ಎಂಬುದರಿಂದ ವ್ಯುತ್ಪತ್ತಿಯನ್ನು ಪಡೆದಿದೆ. ಕರು ನಾಡು ಎಂದರೆ ಕಪ್ಪು ಮಣ್ಣಿನ ನಾಡು, "ಎತ್ತರದ ಪ್ರದೇಶ" ಎಂದು ಅರ್ಥ. ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ ೧೫೦೦ ಅಡಿ ಇದ್ದು ಇದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರವುಳ್ಳ ರಾಜ್ಯಗಳಲ್ಲಿ ಒಂದು.[4]
ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ. ೨೦೦೧ ರ ಜನಗಣತಿಯಂತೆ, ೫ ಕೋಟಿಗೂ ಹೆಚ್ಚು ಜನಸಂಖ್ಯೆ ಇರುವ ಹತ್ತು ಭಾರತೀಯ ರಾಜ್ಯಗಳಲ್ಲಿ ಕರ್ನಾಟಕವೂ ಒಂದು.
- ಕರ್ನಾಟಕದ ರಾಜಧಾನಿಯಾದ ಬೆಂಗಳೂರು ಮಾತ್ರ ೧.೩೦ ಕೋಟಿಗಿಂತ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದ ನಗರ. ಇತರ ಪ್ರಮುಖ ನಗರಗಳೆಂದರೆ ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ದಾವಣಗೆರೆ, ಬಳ್ಳಾರಿ, ಕಲಬುರಗಿ, ವಿಜಯಪುರ, ಕಾರವಾರ ಮತ್ತು ಬೆಳಗಾವಿ. ಪೂರ್ವ ಶಿಲಾಯುಗದಷ್ಟು ಪ್ರಾಚೀನತೆಯಿರುವ ಕರ್ನಾಟಕವು ಭಾರತದ ಅನೇಕ ಪ್ರಬಲ ಸಾಮ್ರಾಜ್ಯಗಳಿಗೆ ನೆಲೆಬೀಡಾಗಿದೆ.
- ಈ ಸಾಮ್ರಾಜ್ಯಗಳಿಂದ ಆಶ್ರಯ ಪಡೆದಿರುವ ಅನೇಕ ತತ್ವಜ್ಞಾನಿಗಳು ಮತ್ತು ಕವಿಗಳಿಂದ ಆರಂಭಿಸಲ್ಪಟ್ಟಿರುವ ಸಾಮಾಜಿಕ, ಧಾರ್ಮಿಕ ಹಾಗು ಸಾಹಿತ್ಯಕ ಚಳುವಳಿಗಳು ಇಂದಿನವರೆಗೂ ನಡೆದುಕೊಂಡು ಬಂದಿವೆ. ಕನ್ನಡ ಭಾಷೆಯ ಸಾಹಿತಿಗಳು ಭಾರತದಲ್ಲಿ ಅತಿ ಹೆಚ್ಚು (ಹಿಂದಿ ಭಾಷೆಯಲ್ಲಿ ಬಿಟ್ಟು) ಜ್ಞಾನಪೀಠ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕವು ಭಾರತದ ಶಾಸ್ತ್ರೀಯ ಸಂಗೀತ ಪರಂಪರೆಗಳಾದ ಕರ್ನಾಟಕ ಸಂಗೀತ ಶೈಲಿಗೆ ಹಾಗು ಹಿಂದೂಸ್ಥಾನಿ ಸಂಗೀತ ಶೈಲಿಗೆ ಮಹತ್ತರವಾದ ಕೊಡುಗೆ ನೀಡಿದೆ.[5]